ಶ್ರೀಕಾಂತ ರಾವ್‌ಗೆ ಅರಣ್ಯಮಿತ್ರ ಪ್ರಶಸ್ತಿ ಪ್ರದಾನ

2

ಉಜಿರೆ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜು.೧೪ರಂದು ಮಂಗಳೂರು ಪುರಭವನದಲ್ಲಿ ನಡೆದ ನೀರಿಗಾಗಿ ಅರಣ್ಯ ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣೆಯ ವಿಶೇಷ ಸಾಧನೆಗಾಗಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರು ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿಯ ಶ್ರೀಕಾಂತ ರಾವ್ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನಗೈದರು. ಶಾಸಕ ಬಿ.ಎ. ಮೊದಿನ್, ಮೇಯರ್ ಕವಿತಾ ಸನಿಲ್, ಅಧ್ಯಕ್ಷ ಬಿ.ಎಚ್. ಖಾದರ್, ಶಾಹುಲ್ ಹಮೀದ್, ಮಮತಾ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶ್ರೀಕಾಂತ ರಾವ್ ಮುಂಡ್ರುಪ್ಪಾಡಿಯವರು ಕಳೆದ ೧೨ ವರ್ಷಗಳಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಲ್ಲಿ ವನಮಹೋತ್ಸವ, ಪರಿಸರ ಪ್ರೇಮ, ವನಸಂರಕ್ಷಣೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದಲ್ಲದೆ ಧರ್ಮಸ್ಥಳ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಈ ಮೊದಲು ವಿ೪ ನ್ಯೂಸ್ ಮೀಡಿಯಾದಿಂದ ಶ್ರೇಷ್ಠ ನಾಗರಿಕ ಪ್ರಶಸ್ತಿ ಸಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.