ಮೂಡುಕೋಡಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

mudkodi silanyasa copy

ವೇಣೂರು: ಮೂಡುಕೋಡಿ ಗ್ರಾಮದ ಹೊಸಮನೆ ಪ.ಜಾತಿ ಕಾಲನಿ ರಸ್ತೆಗೆ ರೂ. ೨೦ ಲಕ್ಷದಲ್ಲಿ ನಿರ್ಮಾಣ ಆಗಲಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಅವರು ಶಿಲಾನ್ಯಾಸ ನೆರವೇರಿಸಿದರು. ಈ ವೇಳೆಯಲ್ಲಿ ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಮಂಗಳೂರು ಜಿ.ಪಂ. ಸದಸ್ಯರುಗಳಾದ ಪಿ. ಧರಣೇಂದ್ರ ಕುಮಾರ್, ಶೇಖರ ಕುಕ್ಕೇಡಿ, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ, ಎಪಿಎಂಸಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಗ್ರಾ.ಪಂ. ಸದಸ್ಯರಾದ ಜೆಸ್ಸಿ ಟೀಚರ್, ರಾಜೇಶ್ ಪೂಜಾರಿ ಮೂಡುಕೋಡಿ, ಪಂ. ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅನೂಪ್ ಜೆ. ಪಾಯಿಸ್ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.