ಹೈದ್ರಾಬಾದ್‌ನ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಡಾ. ಹೆಗ್ಗಡೆ ಭೇಟಿ

haidarabad samsthege heggade betiಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಆರ್‌ಸೆಟಿ ರಾಷ್ಟ್ರೀಯ ಸಲಹಾ ಸಮಿತಿಯ ಗೌರವ ಅಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಜು.18 ರಂದು ಹೈದ್ರಾಬಾದ್‌ನಲ್ಲಿ ರಾಷ್ಟ್ರೀಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಭೇಟಿ ನೀಡಿದರು. ಶಿಬಿರಾರ್ಥಿಗಳೊಂದಿಗೆ ಸಂವಹನದಲ್ಲಿ ಭಾಗವಹಿಸಿದ ಹೆಗ್ಗಡೆಯವರು ಗ್ರಾಮೀಣ ಯುವ ಜನತೆ ಕೌಶಲಾಭಿವೃದ್ಧಿ ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ತಂತ್ರಜ್ಞಾನ ಉದ್ಯಾನಕ್ಕೆ ಭೇಟಿ ನೀಡಿದ ಹೆಗ್ಗಡೆಯವರು ದೇಶದಲ್ಲಿರುವ 587 ಆರ್‌ಸೆಟಿಗಳ ಮೂಲಕ 23 ಲಕ್ಷ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ತರಬೇತಿ ನೀಡಿದ್ದು ಶೇಕಡಾ ೬೫ ರಷ್ಟು ಮಂದಿ ಸ್ವಾವಲಂಬಿಗಳಾಗಿ ಸ್ವ-ಉದ್ಯೋಗ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ತನ್ನ ಭೇಟಿಯ ಸವಿ ನೆನಪಿಗಾಗಿ ಹೆಗ್ಗಡೆಯವರು ಒಂದು ಸಸಿಯನ್ನು ನೆಟ್ಟರು.
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ. ಡಬ್ಲ್ಯೂ.ಆರ್.ರೆಡ್ಡಿ ಸ್ವಾಗತಿಸಿದರು. ಆರ್‌ಸೆಟಿಗಳ ರಾಷ್ಟ್ರೀಯ ನಿರ್ದೇಶಕ ಕೆ.ಎನ್. ಜನಾರ್ದನ ವಿವಿಧ ಕಾರ್ಯಕ್ರಮಗಳ ಸಂಯೋಜನೆ ಮಾಡಿದರು. ಒ.ಎನ್. ಬನ್ಸಾಲ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.