ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಟನೆ ಪ್ರತಿಬಂಧಿಸದಂತೆ ಎ.ಬಿ.ವಿ.ಪಿ. ರಾಜ್ಯಪಾಲರಿಗೆ ಮನವಿ

Advt_NewsUnder_1
Advt_NewsUnder_1
Advt_NewsUnder_1

ABVP manaviಬೆಳ್ತಂಗಡಿ: ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಟನೆಗಳಿಗೆ ಪ್ರತಿಬಂಧಿಸುವ ಶಿಕ್ಷಣ ಸಚಿವರ ನಡೆಯನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ರಾಜ್ಯ ಸರಕಾರವು ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ಸಂಘಟನೆಗಳನ್ನು ಪ್ರತಿಬಂಧಿಸಲು ಹೊರಟಿರುವ ಈ ಕ್ರಮವು ಡಾ| ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿದಾನದತ್ತ ಆಶಯಗಳಿಗೆ ವಿರುದ್ಧವಾಗಿದ್ದು, ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಮಾರಕವಾಗಿದೆ. ಕಾಂಗ್ರೆಸ್ ಸರಕಾರ ಕಾಲೇಜುಗಳಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ವಿದ್ಯಾರ್ಥಿಗಳ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಸರಕಾರದ ಈ ನಡೆಯನ್ನು ಎಬಿವಿಪಿ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಮ್ಮ ಹಕ್ಕುಗಳನ್ನು ಪಡೆಯಲು ಪ್ರತಿಭಟನೆಯೂ ಒಂದು ಆಸ್ತ್ರವಾಗಿದ್ದು, ಪ್ರಜಾಸತ್ತಾತ್ಮಕ ಆಶಯಗಳಿಗೆ ಪೂರಕವಾಗಿದೆ. ವಿದ್ಯಾರ್ಥಿ ಸಂಘಟನೆಗಳನ್ನು ಪ್ರತಿಬಂಧಿಸುವ ಉತ್ಸುಕದಲ್ಲಿ ಪ್ರಜಾಪ್ರಭುತ್ವ ಮೂಲ ಆಶಯಕ್ಕೆ ಧಕ್ಕೆತರುತ್ತಿದೆ. ಸಂಘಟನೆಗಳಲ್ಲಿ ಭಾಗವಹಿಸುವುದು ವಿದ್ಯಾರ್ಥಿಗಳಿಗೆ ಬಿಟ್ಟ ವಿಚಾರವಾಗಿದ್ದು, ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ. ಕಾಲೇಜು ಕ್ಯಾಂಪಸ್ ನಾಯಕತ್ವದಿಂದ ಇಂದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆನೇಕ ನಾಯಕರು ಬೆಳೆದಿದ್ದು, ತಮ್ಮ ಪಕ್ಷದಲ್ಲೇ ಆನೇಕ ವಿದ್ಯಾರ್ಥಿ ನಾಯಕರಾಗಿ ಹೊರಬಂದಿರುವುದನ್ನು ಶಿಕ್ಷಣ ಸಚಿವರು ಮರೆತಿದ್ದಾರೆ. ರಾಜ್ಯದ ಯುವ ಮತದಾರರ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರಕಾರ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಮುಂದಾಗಿದೆ. ಆ ಮೂಲಕ ಅಡ್ಡದಾರಿಯಲ್ಲಿ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಎಬಿವಿಪಿಯನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಸರಕಾರದ ಈ ನಡೆಯನ್ನು ವಿರೋಧಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ನೀಡುವ ಸಂದರ್ಭ ಮಂಗಳೂರು ವಿಭಾಗ ಸಂಚಾಲಕ ಚೇತನ್ ಪಡೀಲ್, ಪುತ್ತೂರು ಜಿಲ್ಲಾ ಸಂಚಾಲಕ ಪ್ರಜ್ವಲ್ ಶೆಟ್ಟಿ, ಬೆಳ್ತಂಗಡಿ ನಗರ ಕಾರ್ಯದರ್ಶಿ ಸುಮಂತ್, ಮಡಂತ್ಯಾರ್ ನಗರ ಕಾರ್ಯದರ್ಶಿ ತೇಜಸ್, ದೀಕ್ಷಿತ್ ಕೆ. ದಿಡುಪೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.