ಜು.30: ಓಡಿಲ್ನಾಳದಲ್ಲಿ ಭತ್ತದ ನಾಟಿ ಪ್ರಾತ್ಯಕ್ಷಿಕೆ-ಕೆಸರುಗದ್ದೆ ಆಟೋಟ ಸ್ಪರ್ಧೆ

pajiradka press meetಬೆಳ್ತಂಗಡಿ: ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜು.೩೦ರಂದು ಭತ್ತದ ನಾಟಿ ಪ್ರಾತ್ಯಕ್ಷಿಕೆ ಹಾಗೂ ಊರವರು ಮತ್ತು ವಿದ್ಯಾರ್ಥಿಗಳಿಗೆ ಕೆಸರುಗದ್ದೆ ಆಟೋಟ ಸ್ಪರ್ಧೆಯು ಓಡಿಲ್ನಾಳ ಸೇಡಿ ತೋಮಸ್ ಪಿರೇರಾರವರ ಗದ್ದೆಯಲ್ಲಿ ಬೆಳಿಗ್ಗೆ 9.30ರಿಂದ ಜರಗಲಿದೆ ಎಂದು ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಹೇಳಿದರು.
ಅವರು ಜು. 26ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಮುಖ್ಯಸ್ಥ ಡಾ| ಎಂ.ಎಂ. ದಯಾಕರ ಅವರು ನೆರವೇರಿಸಲಿದ್ದು, ಓಡಿಲ್ನಾಲ ನಡುಮನೆಯ ನಾರಾಯಣ ಭಟ್ ಎನ್.ಕೆ. ಭತ್ತದ ನಾಟಿ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಸಂತ ಮಜಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಜಿಲ್ಲಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಕೃಷಿ ವಿಜ್ಞಾನಿಗಳು, ವಿವಿಧ ಕೃಷಿಪತ್ತಿನ ಹಾಗೂ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ವಿವಿಧ ಇಲಾಖಾಧಿಕಾರಿಗಳು, ವಿವಿಧ ಕ್ಷೇತ್ರದ ಸಾಧಕರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಹಗ್ಗಜಗ್ಗಾಟ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ ಜರಗಲಿದೆ ಎಂದರು.
ಸಹಯೋಗ: ಲಯನ್ಸ್ ಕ್ಲಬ್ ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಗೇರುಕಟ್ಟೆ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟ, ಸ್ನೇಹ ಸಂಗಮ ಆಟೋ ಚಾಲಕ-ಮಾಲಕರ ಸಂಘ, ಗ್ರಾ.ಪಂ. ಕಳಿಯ, ಕುವೆಟ್ಟು, ಹಾಲು ಉ.ಸ.ಸಂಘ ಗೇರುಕಟ್ಟೆ ನಾಳ, ಓಡಿಲ್ನಾಳ, ಮದ್ದಡ್ಕ, ಯುವಶಕ್ತಿ, ಭದ್ರಕಜೆ, ಓಡಿಲ್ನಾಳ ಮತ್ತು ಶಕ್ತಿ ಯುವಕ ಮಂಡಲ ರೇಷ್ಮೆರೋಡ್ ಇವುಗಳ ಸಹಯೋಗ ನೀಡಲಿದೆ.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ರಾಜೀವ ಗೌಡ, ಸಂಚಾಲಕ ಶೇಖರ ನಾಕ, ನಿರ್ದೇಶಕ ರಾಜ್‌ಪ್ರಕಾಶ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ಹರಿಪ್ರಸಾದ್ ಹಾಗೂ ಜೆರಾಲ್ಡ್ ಪಿರೇರಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.