HomePage_Banner_
HomePage_Banner_
HomePage_Banner_

ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ : ಡಾ| ವೀರೇಂದ್ರ ಹೆಗ್ಗಡೆ

Advt_NewsUnder_1

DV Heggadeಧರ್ಮಸ್ಥಳ: 2017ರ ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಶುಭಾವಸರದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದಾಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 600 ಶ್ರದ್ಧಾ ಕೇಂದ್ರಗಳಲ್ಲಿ 3,20,000 ಮಂದಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಸ್ವಚ್ಛತಾ ಅಭಿಯಾನದಿಂದ ಶ್ರದ್ಧಾ ಕೇಂದ್ರಗಳ ಸಾನ್ನಿಧ್ಯ ವೃದ್ಧಿಯಾಗಿದೆ. ದರ್ಶನಕ್ಕೆ ಬರುವ ಭಕ್ತರಲ್ಲಿ ಭಕ್ತಿಯೊಂದಿಗೆ ಪವಿತ್ರ ಮನೋಭಾವ ಮೂಡಿ ಬಂದಿದೆ. ಶ್ರದ್ಧಾ ಕೇಂದ್ರಗಳ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಜನ ಜಾಗೃತಿ ಉಂಟಾಗಿದೆ. ಈ ಕಾರ್ಯದಲ್ಲಿ ನಮ್ಮ ಕ್ಷೇತ್ರದ ಭಕ್ತರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಜಾತಿ-ಮತ ಬೇಧವಿಲ್ಲದೆ ಎಲ್ಲಾ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದು ಅಭಿನಂದನಾರ್ಹ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವಚ್ಛತಾ ಅಂದೋಲನದ ಪರಿಣಾಮವಾಗಿ ಎಲ್ಲಾ ಶ್ರದ್ಧಾ ಕೇಂದ್ರಗಳಲ್ಲಿ ನಿರಂತರ ಸ್ವಚ್ಛತಾ ಕಾರ್ಯಕ್ರಮಗಳು ನಡೆದು ಜನರಲ್ಲಿ ಅರಿವು ಜಾಗೃತಿ ಉಂಟಾಗಿದೆ. ಈ ಬಾರಿಯ 71ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿಯೂ ಮತ್ತೆ ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯ ಕಾರ್ಯ ಮುಂದುವರಿಸಿ ಸಹಕರಿಸಿರುವುದಕ್ಕೆ ಸಂತೋಷವಾಗಿದೆ. ಇದು ನಿರಂತರವಾಗಿ ನಡೆಯಬೇಕಾದ ಕರ್ತವ್ಯ ರೂಪದ, ಸೇವಾ ರೂಪದ ಸಮರ್ಪಣಾ ಕಾರ್ಯಕ್ರಮವಾಗಿದೆ. ಯಾವುದೇ ಕಾರಣಕ್ಕೂ ಕ್ಷೇತ್ರಗಳನ್ನು ಅಪವಿತ್ರಗೊಳಿಸಿ ಮತ್ತೆ ಮಲಿನತೆಗೆ ಅವಕಾಶ ನೀಡಬೇಡಿ. ಎಲ್ಲಾ ಪವಿತ್ರ ಶ್ರದ್ಧಾ ಕೇಂದ್ರಗಳು ಸದಾ ನಿಮ್ಮೆಲ್ಲರ ಕಣ್ಗಾವಲಿನಲ್ಲಿ ಮತ್ತು ಸೇವೆಯಲ್ಲಿ ರಕ್ಷಿಸಲ್ಪಡಲಿ ಎಂದು ಆಶಿಸುತ್ತೇನೆ ಎಂದಿರುವ ಅವರು ಸ್ವಚ್ಛತಾ ಅಭಿಯಾನದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಹಾಗೂ ಶ್ರದ್ಧಾ ಕೇಂದ್ರಗಳ ಭಗವತ್ ಸಾನ್ನಿಧ್ಯಗಳು ಸಂತೃಪ್ತರಾಗಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.