ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

prathiba karanji
ಉಜಿರೆ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ-ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಪ್ರತಿಭಾ ಕಾರಂಜಿ-ಕಲೋತ್ಸವ ನಿರ್ವಹಣಾ ಸಮಿತಿ, ಬೆಳ್ತಂಗಡಿ ಮತ್ತು ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆಗಳು, ಶ್ರೀ.ಧ.ಮಂ.ಅ.ಸೆಕೆಂಡರಿ ಶಾಲೆ ಉಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ-ಕಲೋತ್ಸವ-೨೦೧೭ ಇಂದು(ಆ.೩೧) ಶ್ರೀ.ಧ.ಮಂ.ಸೆಕೆಂಡರಿ ಶಾಲೆ ಉಜಿರೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ ಸಾಹುಲ್ ಹಮೀದ್ ನೆರವೇರಿಸಿದರು. ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ಕ್ಷೇತ್ರ ಜಿ.ಪಂ ಸದಸ್ಯೆ ಶ್ರೀಮತಿ ನಮಿತಾ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಕೆ. ಶಶಿಧರ ಶೆಟ್ಟಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್. ಗುರುಪ್ರಸಾದ್ ಭಾಗವಹಿಸಿದ್ದರು.
ಈ ಸಂದರ್ಭ ಎಸ್.ಡಿ.ಎಂ ಪ್ರೌಢ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಚಂದ್ರಿಕಾ, ಬೆಳ್ತಂಗಡಿ ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ರಮೇಶ್ ಕೆ., ಬೆಳ್ತಂಗಡಿ ಕ್ಷೇತ್ರ ಸಂ. ಕೇಂದ್ರ ಸಮನ್ವಯಾಧಿಕಾರಿ ಗಣೇಶ್ ಪಿ., ಉಜಿರೆ ಸಮೂಹ ಸಂಪನ್ಮೂಲ ವ್ಯಕ್ತಿ ಸುರೇಶ್ ಆಚಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.