ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಡಿ. 5 ರಂದು ಮೆದುಳು ಜ್ವರದ ಲಸಿಕಾ ಅಭಿಯಾನವು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ಬೆಳ್ತಂಗಡಿ ಆರೋಗ್ಯ ನಿರೀಕ್ಷಣಾಧಿಕಾರಿ ಗಿರೀಶ್ ರವರು ವಿದ್ಯಾರ್ಥಿಗಳಿಗೆ ಮೆದುಳು ಜ್ವರ ವೈರಾಣು, ರೋಗ ಹರಡುವ ಕ್ರಮ, ಚುಚ್ಚುಮದ್ದು ಹಾಗೂ ಮುಂಜಾಗ್ರತೆಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ಲಸಿಕೆಯ ಬಗ್ಗೆ ಭಯಪಡದೆ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ತಿಳಿಸಿ ಅಭಿಯಾನಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಮರಿಯಮ್ಮ, ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಶ್ರೀಮತಿ ಕಮಲ ಮತ್ತು ಶ್ರೀಮತಿ ಭೇಶ್ ಕುಮಾರಿ, ಸಮುದಾಯ ಆರೋಗ್ಯ ಅಧಿಕಾರಿ ಸತೀಶ್, ಶುಶ್ರೂಷಣಾ ಅಧಿಕಾರಿ ಶ್ರೀಮತಿ ರತ್ನ ಉಪಸ್ಥಿತರಿದ್ದು ಸಹಕರಿಸಿದರು. ಸಹ ಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
p>