ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಶಿಬಿರ

0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ 2022-23ನೇ ಸಾಲಿನ ರಾಷ್ಟ್ರೀಯ ಯೋಜನೆ ಘಟಕ 1 ಮತ್ತು 2ರ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಜತ್ತೋಡಿ, ಬೆರ್ಕಳ ಇಲ್ಲಿ ಆಯೋಜಿಸಲಾಗಿದ್ದು, ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಡಿ.21ರಂದು ಶ್ರೀಮತಿ ಶಶಿಪ್ರಭ, ಅಧ್ಯಕ್ಷರು, ಗ್ರಾಮ ಪಂಚಾಯತ್ ಮಡಂತ್ಯಾರು ಇವರು ನೆರವೇರಿಸಿ ಕೊಟ್ಟರು.

ಶಿಬಿರದ ಯೋಜನಾಧಿಕಾರಿಯಾದ ಪ್ರೊ. ಸಂತೋಷ್ ಪ್ರಭು ಇವರು ಶಿಬಿರದ ಮಹತ್ವದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಶ್ರೀಮತಿ ಶಶಿಪ್ರಭ ಇವರು ವಿದ್ಯಾರ್ಥಿ ದೆಸೆಯಲ್ಲಿ ಸೇವೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುತ್ತಾರೆ, ಇದು ವಿದ್ಯಾರ್ಥಿಗಳು ಹಾಗೂ ಸಮಾಜದ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಡಾ. ಟಿ.ಕೆ ಶರತ್ ಕುಮಾರ್,ಕಾಲೇಜಿನ ಪ್ರಾಂಶುಪಾಲರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು.ಈ ಕಾರ್ಯಕ್ರಮವನ್ನು ಲಕ್ಷ್ಮಿ ಜೆ ನಿರ್ವಹಿಸಿದರು, ಮನೋಜ್ ಅವರು ಧನ್ಯವಾದವಿತ್ತರು.

ಕಾಲೇಜಿನ ಯೋಜನಾಧಿಕಾರಿಯಾದ ಶ್ರೀಮತಿ ಚಿತ್ರಾ ಪಡಿಯಾರ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಶಶಿಕಿರಣ್, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಬೀನಾ , ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು ಹಾಗೂ ಶಾಲೆಯ ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here