ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

0


ಬೆಳ್ತಂಗಡಿ: ಡಿ. ಕೆ. ಆರ್. ಡಿ. ಎಸ್. ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ ಡಿ. 23 ರಂದು ಸಂತೋಮ್ ಟವರ್ ಸಭಾಂಗಣದಲ್ಲಿ ಕ್ರಿಸ್ಮಸ್ ಕೇಕ್ ಕತ್ತರಿಸಿ ಆಚರಿಸಲಾಯಿತು.

ಸಂಸ್ಥೆಯ ನಿರ್ದೇಶಕರು ವ. ಫಾ. ಬಿನೋಯಿ ಎ. ಜೆ.ಮಾತನಾಡಿ ಮಾಧ್ಯಮ ಮಿತ್ರರು ಸುಭದ್ರ ಸಮಾಜ ಕಟ್ಟುವಲ್ಲಿ ಮಾಡುತ್ತಿರುವ ಸೇವೆಯನ್ನು ಸ್ಮರಿಸುತ್ತಾ ಕೃತಜ್ಞತೆ ಸಲ್ಲಿಸಿದರು. ತಾಲೂಕು ಪತ್ರಕರ್ತ ಸಂಘದ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಕ್ಲಬ್ ಅಧ್ಯಕ್ಷ ಸತೀಶ್ ಪೆರ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಮತ್ತು ಮಾಧ್ಯಮ ಕ್ಲಬ್ ಸದಸ್ಯರು, ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here