ಚಾರ್ಮಾಡಿ ಘಾಟಿಯ ಸೋಮನಕಾಡು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ಸುಟ್ಟುಕರಕಲಾದ ನೂರಾರು ಎಕರೆ ಅರಣ್ಯ ಪ್ರದೇಶ

0

ಚಾರ್ಮಾಡಿ: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು ನೂರಾರು ಎಕರೆ ಅರಣ್ಯ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಕಿ ನಂದಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ. ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here