ಕಲ್ಮಂಜ: ರಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಇವರ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕಲ್ಮಂಜ ಗ್ರಾಮ ಪಂಚಾಯತಿನಲ್ಲಿ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ತರಬೇತಿಯನ್ನು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಮತ್ತು ನೀರುಗಂಟಿಯವರಿಗೆ ಡಿ.27 ರಂದು ತರಬೇತಿಯನ್ನು ಆಯೋಜಿಸಲಾಗಿತ್ತು.
ಈ ತರಬೇತಿಯಲ್ಲಿ ಗಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಒಟ್ಟು 11 ಮಂದಿ ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಹಾಜರಿದ್ದರು. ಈ ತರಬೇತಿಯನ್ನು ಅನುಷ್ಠಾನ ಬೆಂಬಲ ಸಂಸ್ಥೆಯ ಗ್ರಾಮ್ಸ್ ಸಂಸ್ಥೆಯ ಜಲಜೀವನ್ ಮಿಷನ್ ಬೆಳ್ತಂಗಡಿ ತಾಲೂಕಿನ ಸಿಬ್ಬಂದಿಯವರಾದ ಶ್ರೀಮತಿಪುಷ್ಪಲತಾರವರು ಪ್ರಾತ್ಯಕ್ಷಿಕೆಯ ಮೂಲಕ ತರಬೇತಿಯನ್ನು ನೀಡಿದರು.
p>