ಬೆಳ್ತಂಗಡಿ : ಸ.ಪ್ರ.ದ.ಕಾಲೇಜು ಬೆಳ್ತಂಗಡಿ ಇದರ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಎನ್.ಸಿ.ಸಿ., ರೋವರ್ಸ್ ಮತ್ತು ರೇಂಜರ್ಸ್ ರೆಡ್ ರಿಬ್ಬನ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಜೌಷಧಿ ವ್ಯಾಪಾರಸ್ಥರ ಸಂಘದ ಸಹಕಾರದೊಂದಿಗೆ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಶಿಬಿರವನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಮನೋರಮ ಭಟ್ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ಎಂ.ಸಿ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ. ಪ್ರಿಯಂವದಾ ರಕ್ತದಾನ ಮಹತ್ವ ತಿಳಿಸಿದರು. ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯಕೆ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಮತಿ ರಕ್ಷಾ ರಾಘ್ನೇಶ್ , ಜೌಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಚಂದ್ರಶೇಖರ್, ಕಾರ್ಯದರ್ಶಿ ರಘುನಾಥ ದಾಮ್ಲೆ, ರೋಟರಿ ಕ್ಲಬ್ ನ ಶ್ರೀಧರ ಕೆ.ವಿ, ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಕು.ಶ್ರದ್ಧಾ ನಿರೂಪಿಸಿ, ರೆಡ್ ಕ್ರಾಸ್ ಘಟಕದ ಸಂಚಾಲಕ ಡಾ. ಶೈಲೇಶ್ ಕುಮಾರ್ ಡಿ ಹೆಚ್ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಗಂಗಾಧರ ವಂದಿಸಿದರು. ಒಟ್ಟು 67 ಯುನಿಟ್ ರಕ್ತ ಸಂಗ್ರಹಿಸಲಾಯಿತು.