ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮೂಡಪ್ಪ ಸೇವೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಜ.23 ರಂದು ಪ್ರಾರಂಭಗೊಂಡಿತು.
ಜ.23 ರಂದು ಸಂಜೆ ನಡೆದ ಭಜನೋತ್ಸವ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಉಜಿರೆ ಎಸ್ಡಿಎಂ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ. ಶ್ರೀಧರ ಭಟ್ ಧಾರ್ಮಿಕ ಪ್ರವಚನ ನೀಡಿದರು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬೆಳ್ತಂಗಡಿ ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್ ಕನ್ಯಾಡಿ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಕೆನರಾ ಬ್ಯಾಂಕ್ ಪ್ರಬಂಧಕ ಅಂಕಿತ್, ಕೊಕ್ಕಡ ಗ್ರಾ.ಪಂ. ಸದಸ್ಯ ಪುರುಷೋತ್ತಮ ಎಂ., ಮೂಡಪ್ಪ ಸೇವೆ ಸಂಚಾಲಕ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಂಞಕಣ್ಣನ್, ವಿನಾಯಕ್ ರಾವ್ ಕನ್ಯಾಡಿ, ಕಿಟ್ಟಣ್ಣ ಮಲೆಕುಡಿಯ, ಪುರುಷೋತ್ತಮ ಮಡ್ಯಾಲಗುಂಡಿ ಇವರನ್ನು ಸನ್ಮಾನಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಸ್ವಾಗತಿಸಿದರು. ಧರ್ಣಪ್ಪ ಗೌಡ ಪಟ್ಟೂರು ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ಪೂವಾಜೆ ವಂದಿಸಿದರು.
ಬೆಳಿಗ್ಗೆ ಹರೀಶ್ ನೆರಿಯ ರವರ ನೇತೃತ್ವದಲ್ಲಿ ಜಿಲ್ಲೆಯ ಆಹ್ವಾನಿತ ಭಜನಾ ಮಂಡಳಿಗಳಿಂದ ಕುಣಿತ ಭಜನೆ, ಕಾಮಧೇನು ಗೋಶಾಲೆಯಿಂದ ಶ್ರೀ ಕ್ಷೇತ್ರದ ವರೆಗೆ ಭಜನಾ ಶೋಭಾಯಾತ್ರೆ, ರಾತ್ರಿ ಭಜನಾ ಮಂಗಳೋತ್ಸವ ನಂತರ ಖ್ಯಾತ ಸಿತಾರ್ ವಾದಕ ಸಿತಾರ್ ರತ್ನ ಶ್ರೀ ಕೊಚ್ಚಿಕಾರ್ ದೇವದಾಸ್ ಪೈ ರವರಿಂದ ಸಿತಾರ್ ವಾದನ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಮೂಡಪ್ಪ ಸೇವೆ ಜರುಗಿತು.