ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ದ. ಕ. ಜಿಲ್ಲಾ,25 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಅವರು ಫೆ 3 ರಂದು ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದಲ್ಲಿ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ಉದ್ಘಾಟನೆ ಗೊಂಡಿತು.
ಸಮ್ಮೇಳನ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಹೇಮಾವತಿ ವಿ. ಹೆಗ್ಗಡೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಉದ್ಘಾಟಿಸಿದರು.
ಸಮ್ಮೇಳನ ಸಂಯೋಜನಾ ಸಮಿತಿಯ ಗೌರವ ಅಧ್ಯಕ್ಷ ಡಿ ಹರ್ಷೇಂದ್ರ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಬೆಂಗಳೂರು ಸೋಮಯಾಜಿ ಸಮೂಹ ಸಂಸ್ಥೆಗಳ ರಘುನಾಥ ಸೋಮಯಾಜಿ, ಕಾಸರಗೋಡು ಜಿಲ್ಲಾ ಕ. ಸಾ. ಪ. ಅಧ್ಯಕ್ಷ ಎಸ್.ವಿ. ಭಟ್, ರಾಜ್ಯ ಸಾ. ಪ. ಸದಸ್ಯ ಮಾಧವ ಎಂ. ಕೆ, ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಕ. ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಪರಿಷತ್ತಿನ ಸಮ್ಮೇಳನ ಸಂಯೋಜನಾ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ,ಜಿಲ್ಲಾ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ. ಹಾಗೂ ಸದಸ್ಯರು, ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು,ಜಿಲ್ಲಾ ಕ. ಸಾ. ಪ. ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ., ವಿವಿಧ ತಾಲೂಕು ಅಧ್ಯಕ್ಷ ರುಗಳು ಉಪ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಮೊದಲು ಉಜಿರೆ ಬಸ್ ನಿಲ್ದಾಣದಿಂದ ಸಮ್ಮೇಳನದ ಸರ್ವ ಅಧ್ಯಕ್ಷರನ್ನು ಮತ್ತು ಗಣ್ಯರುನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು. ಶಾಸಕ ಹರೀಶ್ ಪೂಂಜಾ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿ ಮೆರಗು ನೀಡಿತು.
ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿ, ಉಪನ್ಯಾಸಕ ಕುಮಾರ ಹೆಗ್ಡೆ ಮತ್ತು ಅನುರಾಧ ಕೆ. ರಾವ್ ನಿರೂಪಿಸಿದರು.