ಮರೋಡಿ: ಉಚ್ಚೂರು ಸುರಭಿ ಮನೆಯ ವಠಾರದಲ್ಲಿ ಹಾಕಿರುವ ವಿದ್ಯುದ್ದೀಪಾಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.
ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಶ್ರೀ ದೇವಿಯ ಭಕ್ತಿಪೂರ್ವಕ ಮೆರವಣಿಗೆ ನಡೆಯಿತು. ನಂತರ ಚೌಕಿ ಪೂಜೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು.
ಕಟೀಲು ಕ್ಷೇತ್ರದ ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರವರು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ.ವಸಂತ ಬಂಗೇರ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ಳಿಬೀಡು ಹೇಮರಾಜ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಮೂಡಬಿದ್ರೆ ಪ್ರಭಾತ್ ಸಿಲ್ಕ್ ಮಾಲೀಕರು, ಮರೋಡಿ ಗ್ರಾ.ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್ ಮತ್ತು ಸದಸ್ಯರು, ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಊರವರು ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.
ಯಕ್ಷಗಾನ ಸೇವಕರ್ತರಾದ ಉಚ್ಚೂರು ಸುರಭಿ ಮನೆಯ ಶ್ರೀಮತಿ ಸುಫಲಾ ಮತ್ತು ಸೇಸಪ್ಪ ಪೂಜಾರಿ, ಶ್ರೀಮತಿ ಯಮುನ ಮತ್ತು ಗೋಪು ಪೂಜಾರಿ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು. ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ನೂತನ ಮನೆಯ ಕೆಲಸ ಮಾಡಿದ ಸದಾನಂದ ಮತ್ತು ಕಟೀಲು ಯಕ್ಷಗಾನ ಕಲಾವಿದರೋರ್ವರನ್ನು ಸನ್ಮಾನಿಸಲಾಯಿತು. ಹಾಗೂ ಕೇಳ ಕಾಶಿಪಟ್ಣ ದೇಗುಲದ ಅನಂತ ಅಸ್ರಣ್ಣ ಮತ್ತು ನಾರಾಯಣ ಭಟ್ ಮಕ್ಕಿ ಇವರನ್ನು ಗೌರವಿಸಲಾಯಿತು.