ಉಜಿರೆ ಗ್ರಾ.ಪಂ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

0

2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಅತೀ ಹೆಚ್ಚು ಅಂಕ ಪಡೆದ ಉಜಿರೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ ಗ್ರಾಮ ಪಂಚಾಯತಿಗಳು ಅರ್ಜಿ ಸಲ್ಲಿಸಿದ್ದು, ಈ ಗ್ರಾಮ ಪಂಚಾಯತಿಗಳಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲೂಕಿಗೆ ಮೂರು ಗ್ರಾಮ ಪಂಚಾಯತಿಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿ, ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾಗಿತ್ತು. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ತಂಡವು ಮಾರ್ಗಸೂಚಿಗಳನುಸಾರ ಸ್ಥಳ/ದಾಖಲೆಗಳನ್ನು ಪರಿಶೀಲನೆ ಮಾಡಿ, ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿದ್ದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ರಾಜ್ಯದ 233 ತಾಲೂಕುಗಳಲ್ಲಿ ಪ್ರತಿ ತಾಲೂಕಿನಿಂದ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿ ಶಿಫಾರಸ್ಸು ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ ರೂ.5 ಲಕ್ಷ ರೂಪಾಯಿಗಳ ಪುರಸ್ಕಾರ ಸಿಗಲಿದೆ.

LEAVE A REPLY

Please enter your comment!
Please enter your name here