ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಫೆ.15 ರಂದು ನವಜೀವನ ಸಮಾವೇಶ 2022-23 ನೇ ಸಾಲಿನ ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೆರವೇರಿಸಿ ವ್ಯಸನಮುಕ್ತರಿಗೆ ಗುರುತಿನ ಚೀಟಿ ವಿತರಣೆ ಮಾಡಿದರು. ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ವಹಿಸಿaದ್ದರು. ಮಾತೃ ಹೇಮಾವತಿ ವಿ.. ಹೆಗ್ಗಡೆಯವರು ಡಾ. ವಿರೂಪಾಕ್ಷ ದೇವರ ಮನೆ ಇವರು ವ್ಯಸನಿಗಳ ಮಕ್ಕಳ ಕುರಿತು ಬರೆದಿರುವ ‘ನಿನಗೆ ನೀನೆ ಗೆಳೆಯ ‘ಪುಸ್ತಕ ಬಿಡುಗಡೆ ಗೊಳಿಸಿದರು. ‘ಜನಜಾಗೃತಿ ಜೀವಮಾನ ಸಾಧನೆಯನ್ನು ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ 10 ವರ್ಷಗಳಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿರ್ವಹಿಸುತ್ತಿರುವ ಅನುಭವಿ ಸಮಾಜಸೇವಕ ಡಾ| ಥೋಮಸ್ ಸ್ಕರಿಯ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ವ್ಯಸನಮುಕ್ತರಿಗೆ ಜಾಗೃತಿ ಅಣ್ಣ ಒಬ್ಬರಿಗೆ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ 4 ಮಂದಿಗೆ ನೀಡಲಾಯಿತು.
ಉಜಿರೆ ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಜಣ್ಣ ಮೂ. ಕೊರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದದ್ಯಾಂತ ಸುಮಾರು 4 ಸಾವಿರ ನವಜೀವನ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು ಭಾಗವಹಿಸಿದ್ದರು. ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಹಾಜರಿದ್ದರು.
ಉಜಿರೆ ಎಸ್ ಡಿ. ಎಂ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ಗೀತೆ ಹಾಡಿದರು ಯೋಜನೆಯ ಸಿಬ್ಬಂದಿಗಳು ಪ್ರಾರ್ಥಿಸಿದರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯಸ್ ವಂದಿಸಿದರು. ಸಮಾರಂಭದಲ್ಲಿ ರಾಜ್ಯದ ಮೂಲೆಮೂಲೆಗಳಿಂದ ಮದ್ಯವರ್ಜಿತ ನವಜೀವನ ಸಮಿತಿ ಸದಸ್ಯರು ಭಾಗಿಯಾಗಿದ್ದರು.