


ಓಡಿಲ್ನಾಳ : ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ದೃಢಕಲಶಾಭಿಷೇಕ ಅಲಂಬಾಡಿ ವೇದಮೂರ್ತಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಫೆ.15 ರಂದು ಜರಗಿತು.

ಬೆಳಿಗ್ಗೆ ಗಣಹೋಮ ದೃಢಕಲಶಾಭಿಶೇಕ ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ ಜೈನ್, ಕೋಶಾಧಿಕಾರಿ ಮನೋಹರ ಪಿ ಸಿ ಪರಾರಿ, ಜಿರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ, ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು, ಓಡಿಲ್ನಾಳ ಧರ್ಮೋಸ್ಥಾನ ಟ್ರಸ್ಟ್ ಅಧ್ಯಕ್ಷ ವೃಷಭ ಅರಿಗ ಪರಾರಿ ಗುತ್ತು, ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಅಧ್ಯಕ್ಷ ಪದ್ಮಗೌಡ. ನಾರಾಯಣ ಸುವರ್ಣ ಬೆಳಾಲು, ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಉಪ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.