ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ19 ರಿಂದ ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ತಾಲೂಕಿನ 81 ಗ್ರಾಮಗಳಿಂದ ಹಾಗೂ ಹೊರ ತಾಲೂಕಿನಿಂದ ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದೆ. ಗುರುವಾಯನಕೆರೆ ಶಕ್ತಿ ನಗರದಲ್ಲಿ ಮಧ್ಯಾಹ್ನ ಗಂಟೆ 2.00 ಕ್ಕೆ ಎಲ್ಲರೂ ಸೇರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು.ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆ ನಡೆಯಲಿದೆ. ಉಜಿರೆ ಲಕ್ಷ್ಮಿ ಗ್ರೂಪ್ಸ್ ನ ಆಡಳಿತದಾರ ಮೋಹನ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಫೆ.25ಕ್ಕೆ ನಾಡಿನ ದೊರೆ ಸಿಎಂ ಬಸವರಾಜ್ ಬೊಮ್ಮಾಯಿ ವೇಣೂರು ಕ್ಷೇತ್ರಕ್ಕೆ ಭೇಟಿ:
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವನ್ನು ಕಣ್ತುಂಬಿಸಿಕೊಳ್ಳುಲು ಈ ನಾಡಿನ ದೊರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಸಚಿವರು, ಶಾಸಕರು ಭಾಗವಹಿಸಲಿದ್ದಾರೆ.