ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ: ಗೋಳಿಯಂಗಡಿಯಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮೆರವಣಿಗೆಗೆ ಚಾಲನೆ

0

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು.

ಗೋಳಿಯಂಗಡಿಯಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮೆರವಣಿಗೆಗೆ ಚಾಲನೆ

ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದ್ದು. ಮೆರವಣಿಗೆಯಲ್ಲಿ ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಹಾಗೂ ಸಮಿತಿಯ ಸರ್ವಸದಸ್ಯರು, ಊರ,ಪರವೂರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

p>

LEAVE A REPLY

Please enter your comment!
Please enter your name here