ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ

0

ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಇದರ ಬ್ರಹ್ಮಕಲಶೋತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ತುಳು ವಿದ್ವಾಂಸರು, ಮಂಗಳೂರು ವಿ.ವಿ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್ ತುಳು ಧರ್ಮದ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಕರಂಬಾರು ಶ್ರೀ ಕೊಲ್ಲಿ ಈಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧೀಶ್ ಹೆಗ್ಡೆ,ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್,ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ರಮೇಶ್ ಗೌಡ, ಹರೀಶ್ ಕುಲಾಲ್,ಪ್ರಕಾಶ್ ಭಟ್, ಅರವಿಂದ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಭಾ ಸುಧೀರ್ ಪ್ರಾರ್ಥಿಸಿ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಸ್ವಾಗತಿಸಿ, ಅರುಣ್ ಕೋಟ್ಯಾನ್ ನಿರೂಪಿಸಿದರು.

LEAVE A REPLY

Please enter your comment!
Please enter your name here