ವೇಣೂರು: ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೆಳಿಗ್ಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ನ್ಯಾಸಗಳು ನಡೆಯಿತು. ಅವಸ್ರುತ ಬಲಿ, ಚಂದ್ರಮಂಡಲ, ಮಹಾ ಪೂಜೆ ಉತ್ಸವ, ಮಂಗಳ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯುತ್ತಿದೆ. ಬೆಳಿಗ್ಗೆ ವೈದಿಕ ವಿಧಿವಿಧಾನಗಳು, 108 ಕಾಯಿ ಗಣಪತಿ ಹೋಮ ನಡೆಯಿತು.
ಸಂಜೆ 4.30 ರಿಂದ ದೊಡ್ಡ ರಂಗಪೂಜೆ, ಉತ್ಸವ ಮಹಾರಥೋತ್ಸವ ,ಪ್ರಸಾದ ವಿತರಣೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭಾಶಂಸನೆ ನೀಡಲಿದ್ದಾರೆ. ಶ್ರೀ ಧಾಮ ಮಾಣಿಲದ ಯೋಗಿ ಕೌಸ್ತುಭ ಮೋನದಾಸ ಪರಮಹಂಸ ಸ್ವಾಮೀಜಿ, ಚಿತ್ರದುರ್ಗ ಮಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಲಿದ್ದಾರೆ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
p>