ವೇಣೂರು: ಇತಿಹಾಸ ಪ್ರಸಿದ್ದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶುಭಾಶಂಸನೆಯ ಮಾತುಗಳನ್ನಾಡಿದರು.
ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮಿಜೀಯವರು ಆಶೀರ್ವಚನ ನೀಡಿದರು.
ಸಭಾ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಬರೋಡಾ ತುಳುಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿದರು.
ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಶ್ರೀ ಕ್ಷೇತ್ರ ಕಟೀಲುವಿನ ಹರಿನಾರಾಯಣ ಅಸ್ರಣ್ಣ, ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಬಿ.ರಮಾನಾಥ ರೈ,ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವ ಕುಮಾರ್, ಉಜಿರೆ ಲಕ್ಷ್ಮಿ ಗ್ರೂಪ್ಸ್ ನ ಆಡಳಿತ ನಿರ್ದೇಶಕ ಮೋಹನ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಮೂಡುಕೋಡಿ ತಿರುಗನಬೆಟ್ಟು ಗುಲಾಬಿ ದೇವಾಡಿಗ ಉಪಸ್ಥಿತರಿದ್ದರು.
ರಕ್ಷಾ ಪ್ರಾರ್ಥಿಸಿ,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್ ಪುರುಷೋತ್ತಮ ರಾವ್ ಸ್ವಾಗತಿಸಿದರು.ಅಜಿತ್ ಕೊಕ್ರಾಡಿ ನಿರೂಪಿಸಿದರು.