ಉಜಿರೆ : ಶ್ರೀ ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿದ್ಯಾರ್ಥಿಗಳು ತಯಾರಿಸಿರುವ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವು ಫೆ. 28 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಇವರು ವಿಜ್ಞಾನ ಮಾದರಿಯೊಂದಕ್ಕೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ವಿಜ್ಞಾನ ಮತ್ತು ತಾಂತ್ರಿಕತೆ ಬೆಳೆದು ಬಂದ ಆಶ್ಚರ್ಯಕರ ಹಾದಿಯ ಬಗ್ಗೆ ಮತ್ತು ವಿದ್ಯಾರ್ಥಿ ದೆಸೆಯಲ್ಲಿಯೇ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇನ್ನೊರ್ವ ಅತಿಥಿ ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ವಿಜಯ ಜಿ.ಅರಳಿ ಇವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಇವರು ವಹಿಸಿದ್ದರು. ವಿದ್ಯಾರ್ಥಿನಿ ಪ್ರತೀಕ್ಷ ಸ್ವಾಗತಿಸಿದರು, ಶಿಕ್ಷಕ ಪವನ್ ಕುಮಾರ್ ಅತಿಥಿಗಳ ಪರಿಚಯ ಮತ್ತು ಗೌರವಾರ್ಪಣೆಯನ್ನು ನಡೆಸಿಕೊಟ್ಟರು ವಿದ್ಯಾರ್ಥಿನಿ ಅನನ್ಯ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ವಿಖ್ಯಾತ್ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.