ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ಬೆಳ್ತಂಗಡಿ, ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮ ಮಾ 3 ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಲಿದೆ.
ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಉದ್ಘಾಟಿಸಲಿದ್ದಾರೆ. ಭಾರತೀಯ ಮಜ್ಧೂರು ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉದ್ಯಮಿ ಮೋಹನ್ ಕುಮಾರ್ ಉಜಿರೆ, ಬಿಎಂಎಸ್ ನ ಹಿರಿಯ ಕಾರ್ಮಿಕ ನಾಯಕರಾದ ವಿಶ್ವನಾಥ ಶೆಟ್ಟಿ, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಬಿಎಂಎಸ್ ತಾಲೂಕು ಅಧ್ಯಕ್ಷ ಉದಯ ಕುಮಾರ್ ಬಿಕೆ, ಬಿಎಂಸ್ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಕೃಷ್ಣ ಬೆಳಾಲು, ಗೌರವ ಸಲಹೆಗಾರ ಉಮೇಶ್ ಅತ್ತಾಜೆ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ
p>