ಬೆಳ್ತಂಗಡಿ: ಮಹಿಳೆಯರನ್ನು ಗೌರವಿಸಬೇಕು. ಕುಟುಂಬಗಳಲ್ಲಿ ಹಾಗೂ ಸಮಾಜದಲ್ಲಿ ಗಂಡು ಹೆಣ್ಣು ಸಮಾನರು ಅವರವರ ಪಾತ್ರವನ್ನು ಉತ್ತಮವಾಗಿ ನಿರ್ವಹಿಸಿದರೆ ಅಭಿವೃದ್ಧಿ ಸಾಧ್ಯ ಎಂದು ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ. (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಮಾ. 04 ರಂದು ಸಾನ್ತೋಮ್ ಟವರ್ ಬೆಳ್ತಂಗಡಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷರು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಅಧ್ಯಕ್ಷ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರು ಉಧ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎಲಿಯಮ್ಮ ತೋಮಸ್ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಕುಮಾರ್ ಬಿ ವೃತ್ತ ನಿರೀಕ್ಷಕರು ಬೆಳ್ತಂಗಡಿ ಪೋಲೀಸ್ ಠಾಣೆ ಇವರು ವಿಶೇಷವಾಗಿ ಸಂಘದಿಂದ ಗುರುತಿಸಿದ ಶ್ರೀಮತಿ ಎಂಬ ಸದಸ್ಯೆಗೆ ಸನ್ಮಾನ ಮಾಡಿ ಶುಭ ಹಾರೈಸಿದರು.
ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ರಶ್ಮಿ ಮಹಿಳೆಯರಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು ಹಾಗೂ ಮಹಿಳಾ ಆರೋಗ್ಯದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಪ್ರಿಯಾ ಚಾಕೋ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಇವರು ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ತರಕಾರಿ ತೋಟ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಪರಮಪೂಜ್ಯ ಧರ್ಮಧ್ಯಕ್ಷರು ಬಹುಮಾನವನ್ನು ವಿತರಿಸಿದರು.
ಡಿ. ಕೆ. ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ।ಫಾ ಬಿನೋಯಿ ಎ ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಳ್ತಂಗಡಿ, ಕಳೆಂಜ , ತೋಟತ್ತಾಡಿ ಮತ್ತು ಗಂಡಿಬಾಗಿಲು ಮಹಾಸಂಘದ ಅಡಿಯಲ್ಲಿರುವ ಸಂಘಗಳ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಸೌರಭ ಸಂಘ ಧರ್ಮಸ್ಥಳ ಇವರು ಪ್ರಾರ್ಥನ ಗೀತೆಯನ್ನು ಹಾಡಿದರು.ಉದಯ ಮಹಾಸಂಘ ಗಂಡಿಬಾಗಿಲು ಸದಸ್ಯೆ ಶ್ರೀಮತಿ ಮಿನಿ ಸ್ವಾಗತಿಸಿದರು. ಅರುಣೋದಯ ಮಹಾಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ಶ್ರೀಮತಿ ಲಲಿತಾ ವಂದಿಸಿದರು. ಡಿ ಕೆ ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು.