ಉಜಿರೆ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆಯ ಸೇವೆ ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.
ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಉಜಿರೆಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇವರ ಸಾಧನೆಯನ್ನು ಗುರುತಿಸಿ ಸರ್ಕಾರ ಈ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಮಾ.15ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೋಪಾಲಕೃಷ್ಣ ಕಾಂಚೋಡು ಅವರಿಗೆ “ಕೃಷಿಕ ರತ್ನ” ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.