ಎಸ್ ಡಿ ಯಂ ಪಾಲಿಟೆಕ್ನಿಕ್ – ಹದಿಹರೆಯದಲ್ಲಿ ಆರೋಗ್ಯ ಮಾಹಿತಿ

0

ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಆರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ. 28 ರಂದು ಹಮ್ಮಿಕೊಳ್ಳಲಾಯಿತು. ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಆರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು.


ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿದರು. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

p>

LEAVE A REPLY

Please enter your comment!
Please enter your name here