


ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಾರ್ಚ್ 23, 24, 25 ಹಾಗೂ ಎಪ್ರಿಲ್ 1ರಂದು ಸ್ಕೌಟ್ ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯ ದೈಹಿಕ ಶಿಕ್ಷಕರು ಹಾಗೂ ಸ್ಕೌಟ್ ತರಬೇತುದಾರ ವಲೇರಿಯನ್ ಸೀಕ್ವೆರಾ ರವರು ವಿದ್ಯಾರ್ಥಿಗಳಿಗೆ ಸ್ಕೌಟ್ ಮತ್ತು ಗೈಡ್ಸ್ ನ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ಗಂಟುಗಳು, ಪ್ರಥಮ ಚಿಕಿತ್ಸೆ, ಅಂದಾಜು ಗಣನೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಶಾಲಾ ಮುಖ್ಯೋಪಾಧ್ಯಾಯ ವಂ. ಫಾ. ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ಸ್ಕೌಟ್ ಗೈಡ್ಸ್ ನಂತಹ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ನುಡಿದು ಶುಭ ಹಾರೈಸಿದರು. ಸಹಶಿಕ್ಷಕಿಯರಾದ ಶ್ರೀಮತಿ ಬ್ಲೆಂಡಿನ್ ರೊಡ್ರಿಗಸ್, ಶ್ರೀಮತಿ ಶಾಂತಿ ಪಿರೇರಾ, ಶ್ರೀಮತಿ ಅಖಿದಾ ಬಾನು, ಶ್ರೀಮತಿ ಅನಿತಾ, ಶ್ರೀಮತಿ ಎಲ್ವಿಟಾ ಪಾಯ್ಸ್ ಸಹಕರಿಸಿದರು.
