ಪ್ರಭಾಕರ್ ನಾರಾವಿ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿಯ ರಾಜ್ಯಸಂಚಲಕರಾಗಿ ನೇಮಕ

0

ನಾರಾವಿ: 23 ವರ್ಷ ಅದ್ಭುತ ತೀರ್ಪುಗಾರಿಕೆಯ ಅನುಭವ ಹಾಗೂ ಸಂಘಟನಾ ಚಾತುರ್ಯ ಹೊಂದಿರುವ ಪ್ರಭಾಕರ್ ನಾರಾವಿಯವರನ್ನು ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ಕಬಡ್ಡಿ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇವರು ಕಬಡ್ಡಿ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆ ಮಾಡಿದ್ದಾರೆ.

ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ‌ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಮತ್ತು ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here