ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ತನಿಖೆಗೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

0

ಬೆಳ್ತಂಗಡಿ : ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಏ. 12 ರಂದು ರಾತ್ರಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್‌ವಾದಿಗಳ ಕೈವಾಡವಿದೆಯೇ ಎಂದು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಟಿ. ಸುರೇಶ್ ಕುಮಾರ್ ರಿಗೆ ಮನವಿ ನೀಡಿದರು.

ಈ ಸಂಧರ್ಭದಲ್ಲಿ ವಕೀಲರುಗಳಾದ ಉದಯ ಕುಮಾರ್ ಬಿ.ಕೆ, ಪ್ರಕಾಶ್ ಬೆಳ್ತಂಗಡಿ, ತೆರಿಗೆ ಸಲಹೆಗಾರ ಆನಂದ ಗೌಡ, ಕೇಶವ ಅಚ್ಚಿನಡ್ಕ, ಬೆಳ್ತಂಗಡಿ ಸಾರ್ವಜನಿಕ ಶಾರದೋತ್ಸವ ಸಮಿತಿಯ ಅಧ್ಯಕ್ಷ ಮುರಳೀಧರ, ನಂದ ಗೋಕುಲ ಗೋಶಾಲ ಪ್ರಬಂಧಕರು ಶ್ರೀಶ ಭಟ್ ಕಳೆಂಜ, ಸೌ. ಕಮಲಾ ಪೈ ಉಜಿರೆ,ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here