ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ

0

ನ್ಯಾಯತರ್ಪು: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಹರಕೆ ರಂಗಪೂಜೆ ,ದೈವಗಳಿಗೆ ಪರ್ವ ಸೇವೆ ಎ.28ರಂದು ನಡೆಯಿತು.


ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ವೈದಿಕ,ವಿಧಿ- ವಿಧಾನ ಗಳೊಂದಿಗೆ ಜರುಗಿತು. ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ವಾರದ ಭಜನೆ ವಿಜೃಂಭಣೆಯಿಂದ ನಡೆಯಿತು.


ರಂಗ ಪೂಜಾ ಸೇವಾ ಕರ್ತರಾದ ಹೀರ್ಯ ಕೂಸಪ್ಪ ಗೌಡ ದಂಪತಿ ಹಾಗೂ ಮಕ್ಕಳು ಉಪಸ್ಥಿತರಿದ್ದು ವಿಶೇಷ ರಂಗಪೂಜೆ ಸೇವೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ದಿನೇಶ್ ಗೌಡ ಕಲಾಯಿತೊಟ್ಟು, ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಅಭಿವೃದ್ಧಿ ಸದಸ್ಯರು,ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here