


ಬೆಳ್ತಂಗಡಿ : ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ ಹಾಗೂ ರಾಜ್ಯದಲ್ಲಿ 125 ರಿಂದ 150 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಹೇಳಿದರು.ಅವರು ಮೇ.2 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಂಕೀರ್ಣದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ನ 6 ಗ್ಯಾರಂಟಿಗಳನ್ನು ಜನರು ಮುಕ್ತವಾಗಿ ಸ್ವಾಗತಿಸಿದ್ದಾರೆ.

ಬಿಜೆಪಿ ಶೇ.18 ಜನಸಂಖ್ಯೆ ಇರುವ ಅಲ್ಪ ಸಂಖ್ಯಾತರಿಗೆ ರಾಜ್ಯದಲ್ಲಿ ಒಂದೇ ಒಂದು ಸ್ಥಾನದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಿಲ್ಲ, ಆದರೆ ಚುನಾವಣೆ ಸಂದರ್ಭದಲ್ಲಿ ಇಲ್ಲಿಯ ಶಾಸಕರು ಚರ್ಚ್ ಗಳಿಗೆ ತೆರಳಿ ಮತ ಯಾಚುಸುತ್ತಾರೆ. ಹರೀಶ್ ಪೂಂಜ ಕ್ರಿಶ್ಚಿಯನ್ ರರಿಗೆ ಜಾಗ ಮಾರಾಟ ಮಾಡಬಾರದು ಹಾಗೂ ಮುಸ್ಲಿಂರ ಮತ ಬೇಡ ಎಂದು ಹೇಳಿದ ಇವರು ಈಗ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬೆಳ್ತಂಗಡಿಯ ಪ್ರತಿ ಕಡೆ ಮತದಾರರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಕಡೆ ಒಲವು ಬಂದಿದೆ.ಅವರ ಗೆಲುವು ಖಚಿತ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಲ್ಲವ ಸಮಾಜದ ಅಭಿವೃದ್ಧಿಗೆ ನಾರಾಯಣ ಗುರು ಹೆಸರಿನಲ್ಲಿ ನಿಗಮ ರಚಿಸಿ ಕರಾವಳಿಯ ಎಲ್ಲಾ ವರ್ಗದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಬೆಳ್ತಂಗಡಿ ಚುನಾವಣಾ ಉಸ್ತುವಾರಿ ಕೇರಳದ ಶಾಸಕ ಸಜೀವ್ ಜೋಸೆಫ್, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಮೋಹನ ಗೌಡ, ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ತಾ. ಪ. ಮಾಜಿ ಸದಸ್ಯ ವಿನಸೆಂಟ್ ಟ್ ಡಿಸೋಜ, ಮಡಂತ್ಯಾರ್ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜಶೇಖರ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಡಿಸೋಜ ಉಪಸ್ಥಿತರಿದ್ದರು.