ಸಾಮಾಜಿಕ ಜಾಲತಾಣದಲ್ಲಿ ಹರೀಶ್ ಪೂಂಜ ಹೆಸರಿನಲ್ಲಿ ನಕಲಿ ಸಂದೇಶ ಶೇರ್ ಮಾಡಿದವರ ವಿರುದ್ಧ ದೂರು

0

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಇಂದು ಬೆಳ್ತಂಗಡಿ ನಗರ ಠಾಣೆಯಲ್ಲಿ ಶಾಸಕರ ಪರವಾಗಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪದಾಧಿಕಾರಿಗಳು, ತಾಲೂಕು ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೂರು ಪಡೆದುಕೊಂಡ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

p>

LEAVE A REPLY

Please enter your comment!
Please enter your name here