ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಡಾ.ಬಿ.ಯಶೋವರ್ಮ ಅವರ ಸ್ಮರಣಾರ್ಥ ಜೀವವೈವಿಧ್ಯತೆ ಹಾಗೂ ಪರಿಸರ ನಿರ್ವಹಣೆಗೆ ಸಂಬಂಧಿಸಿದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಪೂರಣ್ ವರ್ಮ ಅವರು ಯಶೋವರ್ಮ ಅವರ ನಿಸರ್ಗ ಪ್ರೇಮ, ಸಸ್ಯಜ್ಞಾನ ಹಾಗೂ ಉದ್ಯಾನ ನಿರ್ಮಾಣದ ಕೌಶಲ್ಯಗಳನ್ನು ಉದಾಹರಣೆ ಸಹಿತ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಅವರು , ಯಶೋವರ್ಮ ಅವರ ಬಹುಮುಖಿ ವ್ಯಕ್ತಿತ್ವದ ಮೇಲೆ ಬೆಳಕು ಚೆಲ್ಲಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಅವರು ಯಶೋವರ್ಮ ಅವರ ಆದರ್ಶಗಳನ್ನು ಪಾಲಿಸು ವುದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಗೌರವ ಎಂದರು.
ದಾವಣಗೆರೆ ವಿಶ್ವವಿದ್ಯಾಲಯದ ಡಾ . ಶಿಶುಪಾಲ ಮತ್ತು ಬೆಂಗಳೂರಿನ ಶ್ರೀಧರ್ ಶೆಟ್ಟಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವಹಿಸಿದ್ದರು.
p>