ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

0

ಉಜಿರೆ: ಸುರತ್ಕಲ್‌ನ ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್ ಮತ್ತು ಬುದ್ಧ ಸಿಇಒ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ ಜೂನ್.೬ ರಂದು ಸಿರಿ ಕೇಂದ್ರ ಕಛೇರಿಯಲ್ಲಿ ನಡೆಯಿತು.
ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್‌ನ ಶ್ರೀ ರಾಕೇಶ್ ಜಾಲುಮನೆ ಮತ್ತು ಶ್ರೀ ಚಂದ್ರರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರಳ ಧ್ಯಾನದ ವಿಧಾನ, ಧ್ಯಾನದಿಂದ ಮನಸ್ಸಿನ ಮೇಲೆ ಪ್ರಭಾವ ಬೀರುವ ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವ ಮೂಲಕ ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಉಪಯೋಗಗಳ ಬಗ್ಗೆ ಹಾಗೂ ಸರಿಯಾದ ನಿದ್ರೆ, ಉತ್ತಮ ಆಹಾರ ಪದ್ಧತಿ, ವಿವೇಕಯುಕ್ತ ಮಾತು, ಸಕಾರಾತ್ಮಕ ಯೋಚನೆಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಪ್ರತಿಯೊಬ್ಬ ಮನುಷ್ಯನೂ ಆರೋಗ್ಯಕರವಾಗಿ ಜೀವಿಸಲು ಸಾಧ್ಯ ಎಂದು ಸಿರಿ ಸಿಬ್ಬಂದಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.
ಧ್ಯಾನ ತರಬೇತಿ ಪಡೆದ ಸಿರಿ ಸಿಬ್ಬಂದಿಗಳು ಧ್ಯಾನವನ್ನು ಮಾಡಿದಾಗ ತಮ್ಮ ದೇಹ ಹಾಗೂ ಮನಸ್ಸಿನಲ್ಲಾದ ಅನುಭವಗಳ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ತಮ್ಮ ದೈನಂದಿನ ಜೀವನದಲ್ಲಿ ಧ್ಯಾನವನ್ನು ಅಳವಡಿಸಿಕೊಂಡು ಉತ್ತಮ ಜೀವನವನ್ನು ನಡೆಸುವುದಾಗಿ ತಿಳಿಸಿದರು.


ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಗೆ ಆಗಮಿಸಿ ಸಿರಿ ಸಿಬ್ಬಂದಿಗಳಿಗೆ ಧ್ಯಾನದ ಮಹತ್ವವನ್ನು ತಿಳಿಸಿದ ಗಣ್ಯರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಧ್ಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here