ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

0

ಕುಕ್ಕೇಡಿ: ಭಾರತೀಯ ಸಂಸ್ಕೃತಿಯನ್ನು ಅಳವಡಿಸುವುದು, ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ಶ್ರೀ ನಾಗೇಶ್ ಉಡುಪ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಇಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಶ್ರೀ ಕೆವೈ ಈಶ್ವರ ಭಟ್ ಮಂಜನಕ್ಕಿ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕೋಶಾಧಿಕಾರಿ ಶ್ರೀ ಆನಂದ ಟೈಲರ್ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 90 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

SSLC ಯಲ್ಲಿ 608 (97.23%) ಅಂಕ ಗಳಿಸಿದ ಬೊಳ್ಚಾಲು ರೀತಿಶ್ ಕುಲಾಲ್ ರವರನ್ನು ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಮಾ ನಿತೇಶ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಅಧ್ಯಕ್ಷರಾದ ಶ್ರೀ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಶ್ರೀ ಪದ್ಮನಾಭ ಬಿಯದಡಿ ವಂದಿಸಿದರು.

p>

LEAVE A REPLY

Please enter your comment!
Please enter your name here