ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು 720 ಅಂಕಗಳಲ್ಲಿ 692 ಅಂಕ ಗಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ.
ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿಜ್ಞಾನ ಶಿಕ್ಷಣ ಹಾಗೂ ಯೋಗ್ಯ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸಂಸ್ಥೆಗಳಿಗೆ ಸೇರುವ ಕನಸಿಗೆ ಆಸರೆ ನೀಡಿದ ಎಕ್ಸೆಲ್ ರಾಜ್ಯದಲ್ಲೇ ಮಹೋನ್ನತ ಸಾಧನೆ ಮಾಡಿದೆ.ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ನ ಈ ಅಪೂರ್ವ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.ಎಕ್ಸೆಲ್ ನ ಹಲವು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅಂಕಗಳು ಬಂದಿದ್ದು, ಬಹುತೇಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಅರ್ಹರಾಗಿದ್ದಾರೆ.
ಈ ಎಲ್ಲಾ ಪ್ರತಿಭಾವಂತರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.
p>