ಉಜಿರೆ ಗ್ರಾಮ ಪಂಚಾಯತ್‌ ನಲ್ಲಿ ಮಾಸಿಕ ಸಾಮಾನ್ಯ ಸಭೆ

0

ಉಜಿರೆ: ಗ್ರಾಮ ಪಂಚಾಯತ್‌ ಉಜಿರೆಯಲ್ಲಿ ಜೂನ್ ತಿಂಗಳ ಮಾಹೆಯ ಸಾಮಾನ್ಯ ಸಭೆ 14ರಂದು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಅಧ್ಯಕ್ಷೆ ಪುಷ್ಪಾವತಿ ಆರ್‌ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಉಜಿರೆ ಗ್ರಾಮ ಪಂಚಾಯತಿಯು ಅಮೃತ ಗ್ರಾಮ ಯೋಜನೆಯಡಿ ಆಯ್ಕೆಯಾಗಿದ್ದು, ಸದರಿ ಯೋಜನೆಯಡಿ ಮಂಜೂರಾದ ಅನುದಾನದಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ 12 ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್‌ ಟಿವಿ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರವಿಕುಮಾರ್‌ ಬರೆಮೇಲು, ಸದಸ್ಯರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್,ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್‌ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here