ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮತ್ತು ಹಲ್ಲೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.17ರಂದು ಜಾಮೀನು ನೀಡಿದೆ.
ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಯಶವಂತ ನಾಯ್ಕ ರವರು ನೀಡಿದ ದೂರಿನಂತೆ ಇವರಿಬ್ಬರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು, ಬೆಳ್ತಂಗಡಿ ಪೊಲೀಸರು ಇವರಿರನ್ನು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ವಿಧಿಸಿತ್ತು.