ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು.
ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಜೂ.20ರಂದು ನಡೆದ ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಶೇಖರ ಕುಕ್ಕೇಡಿ, ಹಿರಿಯರಾದ ರಾಜು ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ, ರವೀಂದ್ರ ಪೂಜಾರಿ, ಸ್ವಾಮಿ ಪ್ರಸಾದ ಮಾಲಕ ನಾಗೇಶ್ ಕುಮಾರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ, ತಣ್ಣೀರುಪಂಥ ಗ್ರಾ.ಪಂ.ಉಪಾಧ್ಯಕ್ಷ ಐಯೂಬು ಹಾಗೂ ಎಲ್ಲಾ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
p>