ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ಬೆಳ್ತಂಗಡಿ : ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ನೇ  ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 6 ದಿನಗಳ ಯೋಗ ತರಬೇತಿ ಶಿಬಿರ ಜೂನ್ 21ರಂದು ಸಂಪನ್ನಗೊಂಡಿತು.
ಕಾರ್ಯಕ್ರಮದ ಮುಖ್ಯ ಅತಿಥಿ, ಧರ್ಮಸ್ಥಳ ಶಾಂತಿವನದ ನಿವಾಸಿ ವೈದ್ಯಾಧಿಕಾರಿ ಡಾ. ಶಶಿಕಿರಣ್ ಎಚ್ ಸಿ ಮಾತನಾಡಿ, ವಿದ್ಯಾರ್ಥಿಗಳು ಬೆಳಗ್ಗೆ ಬೇಗನೇ ಏಳುವ ಅಭ್ಯಾಸ, ಯೋಗ ಮತ್ತು ಧ್ಯಾನಗಳನ್ನು ಮೈಗೂಡಿಸಿಕೊಂಡು ಮತ್ತು ಬೇಕರಿ ಆಹಾರವನ್ನು ತ್ಯಜಿಸಿ, ಆರೋಗ್ಯಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.


ಈ ಸಂದರ್ಭದಲ್ಲಿ ಶಾಲೆಯ.ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನಿಗಳ ಮಹಾವಿದ್ಯಾಲಯದ ಎಂ.ಡಿ  ವಿದ್ಯಾರ್ಥಿ ಡಾ. ಗುರುಪ್ರವೀಣ್ ಎಸ್ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.  
ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್ ಮತ್ತು ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಇವರ ಮಾರ್ಗದರ್ಶನದಲ್ಲಿ, ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮ ಸಂಯೋಜಿಸಲಾಯಿತು.

ಶಿಕ್ಷಕ ಶ್ರೇಯಾಂಸ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here