ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನು ಪೂಜ್ಯ ಖಾವಂದರ ಆಶಯದಂತೆ ಆಚರಿಸಲಾಯಿತು.
ಕ್ಷೇತ್ರದ ಅಮೃತ ವರ್ಷಿಣಿ ಸಭಾಭವನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಯೋಗ ದಿನಾಚರಣೆಯ ಲ್ಲಿ ಭಾಗವಹಿಸಿದರು.
ಉಜಿರೆಯ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯರಾದ ದಿಶಾ ಪೂಜಾರಿ ಮತ್ತು ತಂಡ ಯೋಗ ತರಬೇತಿ ನೀಡಿದರು.
ಶಿಕ್ಷಕಿ ಪೂರ್ಣಿಮಾ ಜೋಷಿ ಸ್ವಾಗತಿಸಿ ವಂದಾನರ್ಪಣೆಗೈದರು.ತರಬೇತಿ ನೀಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಕರಾದ ಸಂಜೀವ.ಕೆ ಇವರು ಮುಖ್ಯ ಶಿಕ್ಷಕ ಸುಬ್ರಮಣ್ಯ ರಾವ್ ಇವರ ಮಾರ್ಗದರ್ಶನದಂತೆ ಕಾರ್ಯಕ್ರಮವನ್ನು ಸಂಯೋಜಿಸಿದರು.
p>