ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ 2023-24ನೇ ಸಾಲಿನ (LCDC) ಸಮೀಕ್ಷೆಯ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯು ಜೂ.30ರಂದು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ-2023, ಕುಟುಂಬ ಕಲ್ಯಾಣ ಮತ್ತು ಕ್ಷಯ ರೋಗ ಕರ ಪತ್ರವನ್ನು ತಹಶೀಲ್ದಾರ್ ಸುರೇಶ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಕುಷ್ಠರೋಗ ನಿರ್ಮೂಲನಾ ಸಮೀಕ್ಷೆ, ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸುವ, ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಸಕ್ರಿಯ ಕ್ಷಯರೋಗ ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯಕ್ರಮ, ವಿಟಮಿನ್ ಎ ಅನ್ನಾಂಗ ಪೂರಕ ಕಾರ್ಯಕ್ರಮ, ಟೈಫೈಡ್ಡ್ ಜ್ವರ / ವಿಷಮ ಶೀತ ಜ್ವರದ ಬಗ್ಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ತಾಲೂಕು ಆರೋಗ್ಯಾಧಿಕಾರಿ ಪ್ರಕಾಶ್.ಪಿ., ಪ್ರಕಾಶ್. ಬಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕಿನ ಖಾಸಗಿ ಆಸ್ಪತ್ರೆಗಳ ವ್ಯವಸ್ಥಾಪಕರು ನೆರೆದಿದ್ದರು.