ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಕಾರಣ, ಬೆಳ್ತಂಗಡಿಯ ಮೂವರು ಮುಖಂಡರಿಗೆ ನೋಟಿಸ್ ಜಾರಿ, ಖುದ್ದು ತನಿಖೆಗೆ ಕೆಪಿಸಿಸಿ ಕಚೇರಿಗೆ ಹಾಜರಾಗಲು ಸೂಚನೆ

0

ಬೆಳ್ತಂಗಡಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಸೋಲಿಗೆ ಕಾರಣರಾದ ಆರೋಪದಡಿ ಮೂವರು ನಾಯಕರಿಗೆ ಕೆಪಿಸಿಸಿ ನೊಟೀಸ್ ಜಾರಿ ಮಾಡಿದೆ.
ಕೆಪಿಸಿಸಿಯಿಂದ ಆಂತರಿಕ ತನಿಖೆ ನಡೆಸುವುದಕ್ಕಾಗಿ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸಿನಲ್ಲಿ ತಿಳಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಸೋಲಲು ಕಾರಣರಾಗಿದ್ದಾರೆ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದ್ದ ಹಿನ್ನೆಲೆಯಲ್ಲಿ ವಿವರಣೆ ಪಡೆಯಲು ಬೆಳ್ತಂಗಡಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಜಿ.ಗೌಡ ಮತ್ತು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕ್ರಮ ಕಮಿಟಿಯ ಅಧ್ಯಕ್ಷ ಕೆ.ರಹಮನ್ ಖಾನ್ ನೊಟೀಸ್ ಜಾರಿ ಮಾಡಿದ್ದು ಪತ್ರ ತಲುಪಿದ 7 ದಿನದೊಳಗಾಗಿ ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸಿನಲ್ಲಿ ತಿಳಿಸಲಾಗಿದೆ.

p>

LEAVE A REPLY

Please enter your comment!
Please enter your name here