ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಜು.8 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ, ಲಾಯಿಲ ಜಂಕ್ಷನ್ ಹತ್ತಿರದ ಜ್ಯೋತಿ ಅಸ್ಪತ್ರೆ ಮುಂಭಾಗ ಇರುವ ಸಂಗಮ ಸಭಾ ಭವನದಲ್ಲಿ ಮಧ್ಯಾಹ್ನ 03-00 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರೀಕರು/ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಕುಂದು-ಕೊರತೆ ಅಹವಾಲುಗಳನ್ನು ಸಲ್ಲಿಸಲು ತಾಲೂಕು ಆಡಳಿತವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ಜು.8: ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ರಿಂದ ಲಾಯಿಲದಲ್ಲಿ ಜನತಾ ದರ್ಶನ...