ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಅವರು ಜು.8ರಂದು ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳು ಲಾಯಿಲ, ಬೆಳ್ತಂಗಡಿಗೆ ಭೇಟಿ ನೀಡಿದರು.
ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರು ಸಚಿವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಚಿವರನ್ನು ಪ್ರಸನ್ನ ಶಿಕ್ಷಣ ಸಂಸ್ಥೆಗಳ ಪರವಾಗಿ ಗಂಗಾಧರ ಗೌಡ ಹಾಗೂ ರಂಜನ್ ಗೌಡ ಶಾಲು ಹೊದಿಸಿ ಗೌರವಿಸಿದರು.
ಎಂ.ಎಲ್.ಸಿ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ.ಗೌಡ, ಮಾಜಿ ಅಧ್ಯಕ್ಷ ರಾಜಶೇಖರ ಅಜ್ರಿ, ಬೆಳ್ತಂಗಡಿ ಉಸ್ತುವಾರಿ ಸಾಹಿದ್ ತೆಕ್ಕಿಲ್, ಕೇಶವ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಸುಂದರ ಗೌಡ, ಎ.ಸಿ ಮ್ಯಾಥ್ಯೂ, ಶ್ರೀಧರ್ ಭಿಡೆ, ರಾಜಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಬಾಲಕೃಷ್ಣ ಗೌಡ ಕೇರಿಮಾರ್ ಕಾರ್ಯಕ್ರಮ ನಿರೂಪಿಸಿದರು.
p>