ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ವಸಂತ ಬಂಗೇರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ‘ವಿದ್ಯಾರ್ಥಿ ಜೀವನ ನಮ್ಮ ವ್ಯಕ್ತಿತ್ವವನ್ನು ಬದಲಾಯಿಸುವ ಕಾಲಘಟ್ಟ.ಹಾಗಾಗಿ ಶಿಕ್ಷಣದ ಮೂಲಕ ಕೇವಲ ಪದವಿ ಪಡೆದರೆ ಸಾಲದು.ಮೌಲ್ಯಾಧರಿತ ಶಿಕ್ಷಣ ಪಡೆಯುವ ಸಮಾಜದಲ್ಲಿ ಸರ್ವಯೋಗ್ಯ ವ್ಯಕ್ತಿಯಾಗಿ ಬಾಳಬೇಕು’ ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಉಪನ್ಯಾಸಕರಾದ ಪವಿತ್ರ ಮತ್ತು ಮನುಜ ಶುಭ ಹಾರೈಸಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ಉಪಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಉಪಸ್ಥಿತರಿದ್ದರು.
ಪ್ರಥಮ ಹಾಗೂ ದ್ವಿತೀಯ ವರ್ಷದ ಬಿ.ಎ., ಬಿ.ಕಾಂ ವಿದ್ಯಾರ್ಥಿಗಳು ಕಾರ್ಯಕ್ರಮದ ಆಯೋಜಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅನೇಕ ಮನರಂಜನೆ ಕಾರ್ಯಕ್ರಮಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಬೀಳ್ಕೊಂಡ ಅಂತಿಮ ವರ್ಷದ ಬಿ.ಎ , ಬಿ.ಕಾಂ ವಿದ್ಯಾರ್ಥಿಗಳು ಕಂಪ್ಯೂಟರನ್ನು ಕಾಲೇಜಿಗೆ ಕೊಡುಗೆಯಾಗಿ ನೀಡಿದರು.
ಉಪನ್ಯಾಸಕರಾದ ಸೌಮ್ಯ, ಬಬಿತಾ, ಸತೀಶ್ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.
ದ್ವಿತೀಯ ಬಿ.ಕಾಂ.ವಿದ್ಯಾರ್ಥಿನಿ ಹಸ್ತವಿ ಕಾರ್ಯಕ್ರಮ ನಿರೂಪಿಸಿ, ದ್ವಿತೀಯ ಬಿ. ಎ. ತರಗತಿಯ ಸುನೈನ ಸ್ವಾಗತಿಸಿದರು. ದ್ವಿತೀಯ ಬಿ. ಕಾಂ. ವಿದ್ಯಾರ್ಥಿನಿ ಮೋಹಿನಿ ವಂದಿಸಿದರು.
ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.