ಉಜಿರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಬೆಳ್ತಂಗಡಿ ಹಾಗೂ ತಾಲೂಕು ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜು.22 ರಂದು ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ “ಕಾನೂನು ಮಾಹಿತಿ ಶಿಬಿರ” ನಡೆಯಿತು.
ತಾಲೂಕು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್. ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಕಾನೂನು ಮಾಹಿತಿ ನೀಡಿದರು, ಮುಖ್ಯ ಅತಿಥಿಗಳಾಗಿ ದಯಾನಂದ, ನಿವೃತ್ತ ಸೈನಿಕ ಪ್ರದೀಪ್, ಸತೀಶ್, ಆದಂ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಕೀಲ ಶಿವಕುಮಾರ್ ಟಿ. ಎಸ್. ಭಾಗವಹಿಸಿ ಮಕ್ಕಳಿಗೆ “ಪೋಕ್ಸೋ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ” ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಶಾಲಾ ಮುಖ್ಯ ಶಿಕ್ಷಕಿ ಜಮುನ ಕೆ.ಎಸ್ ವಹಿಸಿಕೊಂಡು ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು.ಸಮಾಜ ವಿಜ್ಞಾನ ಶಿಕ್ಷಕ ಗೌರೀಶ್ ಭಟ್ ನಿರೂಪಿಸಿ, ಗಣಿತ ಶಿಕ್ಷಕಿ ಮೇಧಾ.ಕೆ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕ ಮಹದೇವ ಶೆಟ್ಟಿ ವಂದಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.